ಅರ್ಜುನ್ ಗುರೂಜಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ದೂರು

ಮೈಸೂರು,ಜನವರಿ,10,2025 (www.justkannada.in):  ಅರ್ಜುನ್ ಗುರೂಜಿ ವಿರುದ್ಧ ಲೈಂಗಿಕ‌ ದೌರ್ಜನ್ಯದ  ಆರೋಪ ಕೇಳಿ ಬಂದಿದ್ದು, ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಜುನ್ ಗುರೂಜಿ‌ ಹಾಗೂ ಅವರ  ಶಿಷ್ಯಂದಿರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು ನೀಡಲಾಗಿದೆ. ಮುಗ್ದ ಹೆಣ್ಣುಮಕ್ಕಳು, ಮಹಿಳೆಯರು, ವಿಧವೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದ್ದು, ನೊಂದ‌ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಿ ಎಂದು ಫ್ಯಾಕ್ಸ್ ಮೂಲಕ ಮಹಿಳಾ ಆಯೋಗಕ್ಕೆ ಮನವಿ ಪತ್ರ ರವಾನೆ ಮಾಡಲಾಗಿದೆ.

ಇನ್ನು ಫ್ಯಾಕ್ಸ್ ಮೂಲಕ ಬಂದ‌ ಮನವಿ ಸ್ವೀಕರಿಸಿದ ರಾಜ್ಯ ಮಹಿಳಾ ಆಯೋಗ  ಜನವರಿ 1  ರಂದು ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು 15 ದಿನಗಳ‌ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದೆ. ಅರ್ಜಿದಾರರ ನಿಯಮಾನುಸಾರ ಪರಿಶೀಲಿಸಿ, ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸಲು  ಕ್ರಮ ಕೈಗೊಳ್ಳಬೇಕು, ಅನ್ಯಾಯಕ್ಕೆ ಒಳಗಾದ ಮಹಿಳೆಯರಿಂದ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ ಆಯೋಗ ಪೊಲೀಸರಿಗೆ ಸೂಚನೆ ನೀಡಿದೆ

ನಾನು ದೂರು ನೀಡಿಲ್ಲ- ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಈ ಸಂಬಂಧ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಅರ್ಜುನ್ ಗುರೂಜಿ ವಿರುದ್ದ ನಾನು ದೂರು ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Key words: Sexual harassment,  allegations, against, Arjun Guruji