ನಕ್ಸಲರು ಶಸ್ತ್ರಾಸ್ತ್ರಗಳನ್ನು ಎಲ್ಲಿ ಎಸೆದಿದ್ದಾರೆ ಎಂಬುದು ಗೊತ್ತಿಲ್ಲ; ಪತ್ತೆಗೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜನವರಿ 10,2025 (www.justkannada.in):  ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರಗಳನ್ನು ಹುಡುಕುವುದರಲ್ಲಿ ಸರ್ಕಾರ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಶರಣಾದ ನಕ್ಸಲರು ತಮ್ಮ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಎಸೆದಿದ್ದಾರೆ ಎಂದು ಗೊತ್ತಿಲ್ಲ. ಶಸ್ತ್ರಾಸ್ತ್ರಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತದೆ . ಪೊಲೀಸರು ಶಸ್ತ್ರಾಸ್ತ್ರಗಳನ್ನ ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರ್ಕಾರ ನಡೆಸಿದ್ದಾರೆ ಎಂದು ಕಿಡಿಕಾರಿದರು.

ಎನ್‌ ಕೌಂಟರ್‌ನಲ್ಲಿ‌ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಪರಿಹಾರ  ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.

Key words: Naxalites , weapons, Home Minister, Dr. G. Parameshwar