ಜ.13 ರಂದು ‘ಮನೆಗೊಂದು ಗ್ರಂಥಾಲಯ’ ಯೋಜನೆ ಉದ್ಘಾಟನೆ ಮತ್ತು ‘ಕುಮಾರವ್ಯಾಸ ಭಾರತ’ ಕೃತಿ ಬಿಡುಗಡೆ

ಬೆಂಗಳೂರು,ಜನವರಿ,10,2025 (www.justkannada.in):  ಕನ್ನಡ ಪುಸ್ತಕ ಪ್ರಾಧಿಕಾರವು ಮನೆಗೊಂದು ಗ್ರಂಥಾಲಯ ಯೋಜನೆಯ ಉದ್ಘಾಟನೆ ಹಾಗೂ  ಕುಮಾರವ್ಯಾಸ ಭಾರತ ಎಂಬ ಕರ್ಣಾಟ ಭಾರತ ಕಥಾಮಂಜರಿ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 13.01.2025ರಂದು  ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಬೆಳಿಗ್ಗೆ 11.00ಗಂಟೆಗೆ ಏರ್ಪಡಿಸಿದೆ.

ಸಿಎಂ ಸಿದ್ದರಾಮಯ್ಯ ಈ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಮುಖ್ಯಮಂತ್ರಿಯವರ ಮನೆಯಲ್ಲಿ ಮೊದಲ ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ. ಗ್ರಂಥಾಲಯ ಫಲಕದ ಅನಾವರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ನೆರವೇರಿಸಲಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮುದ್ರಣವಾಗಿರುವ ‘ಕುಮಾರವ್ಯಾಸ ಭಾರತ ಎಂಬ ಕರ್ಣಾಟ ಭಾರತ ಕಥಾ ಮಂಜರಿ’ ಕೃತಿಯ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಈ  ಕೃತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆ ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್. ಮಂಜುಳ ಹಾಗೂ ನಿರ್ದೇಶಕ ಡಾ. ಕೆ. ಧರಣೀದೇವಿ ಮಾಲಗತ್ತಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Key words: Manegondu Granthalaya, project,  inaugurated, Jan 13, CM Siddaramaiah