ಬೆಂಗಳೂರು,ಜನವರಿ,10,2025 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗೆ ಸಿಎಂ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿದ್ದು ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರ ಮಾಡಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 15,000 ಮಾಸಿಕ ಗೌರವಧನ ನೀಡಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂಪಾಯಿ ಗೌರವಧನವನ್ನು ಹೆಚ್ಚಿಸಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.
Key words: CM, meeting, successful, Asha workers