ಚಿಕ್ಕಮಗಳೂರು, ಜನವರಿ 11,2025 (www.justkannada.in): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಪತ್ರವನ್ನ ಬರೆದಿದ್ದಾರೆ.
15 ದಿನದೊಳಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಕೊಲೆ ಮಾಡುವುದಾಗಿ ಎಂಎಲ್ ಸಿ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿ ಪತ್ರ ಬರೆದಿದ್ದಾರೆ 15 ದಿನದೊಳಗೆ“ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದಿದ್ದಾರೆ.
Key words: MLC, CT Ravi, death threat, Complaint, police station