ವಿಜಯನಗರ, ಜನವರಿ 11,2025 (www.justkannada.in): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಯಾವ ಒಪ್ಪಂದ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.
ಡಿನ್ನರ್ ಪಾರ್ಟಿ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿಲ್ಲ, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.
Key words: Siddaramaiah, CM, full term, Minister, M.B. Patil