ಮೈಸೂರು,ಜನವರಿ,11,2025 (www.justkannada.in): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ನಾಳೆ ಈಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಭೇಟಿ ನೀಡಲಿದ್ದಾರೆ.
ಸದ್ಗುರು ಜಗ್ಗಿ ವಾಸುದೇವ್ ಅವರು ಬೆಂಗಳೂರಿನಿಂದ ಕೊಯಮತ್ತೂರಿಗೆ ಮೋಟಾರ್ ಬೈಕ್ ನಲ್ಲಿ ನಾಳೆ(ಭಾನುವಾರ) ತೆರಳುತ್ತಿದ್ದು ಮಾರ್ಗ ಮಧ್ಯದಲ್ಲಿ ಬೆಳಗ್ಗೆ 10.30ಕ್ಕೆ ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಜಗ್ಗಿ ವಾಸುದೇವ್ ಅವರು ಮತ್ತು ಅವರ ತಂಡ ಭೇಟಿ ಮಾಡಲಿದ್ದು ಪ್ರಸಾದವನ್ನು ಸ್ವೀಕರಿಸಿ ನಂತರ ಕೊಯಮತ್ತೂರಿಗೆ ಬೈಕ್ ನಲ್ಲಿ ಪ್ರಯಾಣ ಮುಂದುವರೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Sadhguru Jaggi Vasudev, mysore, Suttur Math