ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ- ಶಾಸಕ ಹೆಚ್.ಸಿ ಬಾಲಕೃಷ್ಣ

ಬೆಂಗಳೂರು,ಜನವರಿ,13,2025 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಲೇ ಇದ್ದು ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನ  ಮಾಧ್ಯಮಗಳ ಜೊತೆ ಮಾತನಾಡಿದ ಬಾಲಕೃಷ್ಣ, ಸಿದ್ದರಾಮಯ್ಯ ಬಳಿಕ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ಬೇಡ್ವಾ? ಸಿದ್ದರಾಮಯ್ಯ ಬಳಿಕ  ಉಪಮುಖ್ಯಮಂತ್ರಿ ಅವರೇ ಸಿಎಂ ಆಗಬೇಕು. ಬೇರೆಯವರು ಆಕಾಂಕ್ಷಿಗಳು ಇದ್ದಾರೆ ಎಂದರು.

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಬೇಕೆಂದು ಒಕ್ಕಲಿಗರ ಸಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಾಲಕೃಷ್ಣ, ಅವರವರ ಜಾತಿ ಅಭಿಮಾನದ ಮೇಲೆ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತೆ.  ಶಾಸಕರು ಚರ್ಚೆ ಮಾಡುತ್ತಿಲ್ಲ ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ಯಾರೋ ಹೇಳಿದರು ಎಂಬ ಕಾರಣಕ್ಕೆ ಹೇಳಿದವರನ್ನೆಲ್ಲ ಸಿಎಂ ಮಾಡಲು ಆಗಲ್ಲ. ಕೆಲವರು ಜಾತಿ ಅಭಿಮಾನದ ಕಾರಣಕ್ಕೆ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Key words: DCM, DK Shivakumar, next CM, – MLA, H.C Balakrishna