ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು ,ಜನವರಿ,13,2025 (www.justkannada.in): ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ  ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇವೆ ಎಂಬ ವದಂತಿಗಳಿಗೆ ಕಾಂಗ್ರೆಸ್ ಉಸ್ತುವಾರಿ ರಣಧೀರ್ ಸಿಂಗ್ ಸುರ್ಜೆವಾಲ ಸ್ಪಷ್ಟನೆ ನೀಡಿದ್ದಾರೆ.

ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ,  ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಾಗಲೇ ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಅವರು ಇದ್ದಾರೆ ಎಂದರು.

ಕೆಲ ಸೆಲೆಕ್ಟೆಡ್ ಗ್ರೂಪ್ ಆಫ್ ಮೀಡಿಯಾದಿಂದ ಇತರ ಗೊಂದಲ ಸೃಷ್ಟಿಯಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಆರೋಪ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಧಿಕಾರ ಬದಲಾವಣೆ, ಹೊಸ ನೇಮಕ ಯಾವುದು ಇಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

Key words: CM Siddaramaiah,DCM DK Shivakumar, Randeep Singh Surjewala