ಮುಡಾ ಕೇಸ್: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಜನವರಿ,15,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 27ಕ್ಕೆ ಮುಂದೂಡಿಕೆ ಮಾಡಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು.  ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು.

ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲರು ಸಮಯ ಕೇಳಿದ್ದು, ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ. ಲೋಕಾಯುಕ್ತ ವರದಿಯನ್ನು ಮುಂದಿನ ವಿಚಾರಣೆಗ ಒಂದು ದಿನ ಮುನ್ನ ವರದಿ ಸಲ್ಲಿಸಬೇಕು ಎಂದು ಸೂಚಿಸಿತು.  ಅಲ್ಲಿಯವರೆಗೆ ಲೋಕಾಯಕ್ತ ಪೊಲೀಸರ ತನಿಖೆ ಮುಂದುದುವರೆಯಲಿದೆ ಎಂದು ಕೋರ್ಟ್ ತಿಳಿಸಿದೆ.

Key words: Muda case, petition, CBI probe,  postponed, High court