ಇಂದು ರಾಜ್ಯ ಸಚಿವ ಸಂಪುಟ ಸಭೆ: ಜಾತಿ ಗಣತಿ ಬಗ್ಗೆ ಚರ್ಚೆ, ನಿರ್ಧಾರ ಸಾಧ್ಯತೆ

ಬೆಂಗಳೂರು,ಜನವರಿ,16,2025 (www.justkannada.in):  ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು ಜಾತಿಗಣತಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಿಗ್ಗೆ 11ಗಂಟೆಗೆ ಸಚಿವ ಸಂಪುಟ ಸಭೆ ಆರಂಭವಾಗಲಿದ್ದು,  ಸಚಿವ ಸಂಪುಟ ಸದಸ್ಯರು ಭಾಗಿಯಾಗಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಜಾರಿ ಕುರಿತು ಚರ್ಚೆಯಾಗಲಿದೆ ಎನ್ನಲಾಗುತ್ತಿದೆ.

ಅಹಿಂದ ಸಚಿವರು ಜಾತಿಗಣತಿ ವರದಿ ಪರ ನಿಂತಿದ್ದರೇ  ಇತ್ತ ಜಾತಿಗಣತಿ ಜಾರಿಗೆ ಲಿಂಗಾಯತ, ಒಕ್ಕಲಿಗ ಸಮಾಜದಿಂದ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಜಾತಿಗಣತಿ ಜಾರಿಗೆ ರಾಜ್ಯ ಸರ್ಕಾರ ಸಿದ್ದವಾಗಿದ್ದು, ಜಾತಿಗಣತಿ ವರದಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಜಾತಿಗಣತಿ ಜಾರಿಯಾದರೆ ಒಕ್ಕಲಿಗ, ಲಿಂಗಾಯತ ಸಮುದಾಯ ಕೆಂಗಣ್ಣಿಗೆ ಸಿಎಂ ಸಿದ್ದರಾಮಯ್ಯ ಗುರಿಯಾಗುವ ಸಾಧ್ಯತೆ ಇದೆ. ವರದಿ ಜಾರಿ ಮಾಡದಿದ್ದರೆ ಅಹಿಂದ ಮತಗಳು ಕೈ ತಪ್ಪುವ ಭೀತಿ ಎದುರಾಗುತ್ತದೆ. ಹೀಗಾಗಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರ ತೀವ್ರ ಕುತೂಹಲ ಮೂಡಿಸಿದೆ.

Key words: State ,Cabinet, meeting, today, caste census