ಕೆಪಿಸಿಸಿ  ಅಧ್ಯಕ್ಷರ ಬದಲಾವಣೆ ಇಲ್ಲ- ರಣದೀಪ್ ಸಿಂಗ್ ಸುರ್ಜೇವಾಲ

ಬೆಳಗಾವಿ,ಜನವರಿ,17,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಬಿಜೆಪಿಗರ ಆಧಾರ ರಹಿತ ಮಾತುಗಳನ್ನ ನಂಬಬೇಡಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ. ಅಧ್ಯಕ್ಷರು ಬದಲಾಗೋದಾದರೆ. ಡಿಕೆ ಶಿವಕುಮಾರ್ ಏಕೆ ಬೆಳಗಾವಿಗೆ ಬರುತ್ತಿದ್ದರು ಎಂದು ಪ್ರಶ್ನಿಸಿದರು.

ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್  ವಿಚಾರ ಕುರಿತು ಪ್ರತಿಕ್ರಿಯಿಸಿದ ರಣದೀಪ್ ಸಿಂಗ್ ಸುರ್ಜೇವಾಲ,  ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದರು.

ಬೆಳಗಾವಿಯಲ್ಲಿ ಈಗ ಮತ್ತೊಮ್ಮೆ ಜನವರಿ 21ರಂದು ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‍್ಯಾಲಿ ಆಯೋಜನೆ ಮಾಡಲಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ದೇಶದ ಎಲ್ಲ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ ಎಂದರು.

Key words: no change, KPCC President, Randeep Singh Surjewala