Champions Trophy:  ಭಾರತ ತಂಡ ಪ್ರಕಟ: ಕನ್ನಡಿಗ ರಾಹುಲ್ ಗೆ ಸ್ಥಾನ

ಮುಂಬೈ,ಜನವರಿ,18,2025 (www.justkannada.in): ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಗೆ  ಭಾರತ ತಂಡವನ್ನ ಪ್ರಕಟಿಸಲಾಗಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಉಪನಾಯಕನಾಗಿ ಶುಬ್ಮನ್ ಗಿಲ್ , ವಿರಾಟ್ ಕೊಹ್ಲಿ, ಕನ್ನಡಿಗ ಕೆ.ಎಲ್ ರಾಹುಲ್ ಗೆ ಸ್ಥಾನ ಸಿಕ್ಕಿದೆ.

ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ತಂಡ ಪ್ರಕಟಿಸಿದೆ.  ಭಾರತ ತಂಡದ ಆಟಗಾರರ ಪಟ್ಟಿ ಹೀಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.

Key words: Champions Trophy,  India Team, Announced