ಚೊಚ್ಚಲ ಖೋ ಖೋ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ತಂಡಕ್ಕೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,20,2025 (www.justkannada.in):  ಚೊಚ್ಚಲ ಖೋ ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ, ಮತ್ತು ಪುರುಷರ ತಂಡ  ಗೆಲುವು ಸಾಧಿಸಿದ್ದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಶುಭಕೋರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೊಟ್ಟ ಮೊದಲ ಖೊ – ಖೊ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ.  ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸದ ಸುನಿಲ್ ಬೋಸ್ ರಿಂದ ಅಭಿನಂದನೆ

ಚೊಚ್ಚಲ ಖೋ ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಚಾಮರಾಜನಗರ ಸಂಸದ ಸುನಿಲ್ ಬೋಸ್ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುನೀಲ್ ಬೋಸ್,  ವಿಶ್ವಕಪ್ ಖೋ-ಖೋ  ಪಂದ್ಯಾವಳಿಯಲ್ಲಿ ನೇಪಾಳ ತಂಡವನ್ನು ಮಣಿಸಿ ಭರ್ಜರಿ ಗೆಲುವು ಸಾಧಿಸಿದ ಭಾರತ ಮಹಿಳಾ ಖೋ ಖೋ ತಂಡಕ್ಕೆ ಹೃದಯ ಪೂರ್ವಕ ಅಭಿನಂದನೆಗಳು.

ಇದೇ ವೇಳೆ ದೇಶದ ಪರವಾಗಿ ಆಡಿ ಗಮನ ಸೆಳೆದ ನಮ್ಮ ಟಿ ನರಸಿಪುರ ತಾಲೂಕಿನ ಬಿ ಚೈತ್ರ ಅವರಿಗೂ ಅಭಿನಂದನೆಗಳು. ಕ್ರೀಡಾ ಲೋಕದಲ್ಲಿ ಕನಸು ಹೊತ್ತಿರುವ ಲಕ್ಷಾಂತರ ಕ್ರೀಡಾಪಟುಗಳಿಗೆ ನಿಮ್ಮ ಸಾಧನೆ ಪ್ರೇರಣೆಯಾಗಲಿ ಮನದುಂಬಿ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Key words:  CM Siddaramaiah, congratulates,Indian, Kho Kho team, World Cup