KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur