ಕಲಬುರಗಿ, ಜನವರಿ 20,2025 (www.justkannada.in): ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರದಲ್ಲಿ ನಡೆದಿದೆ.
ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬೀದರ್ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: horrific accident, three, death, seriously. injured