ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.
Key words: arrested, assaulting, young man, talking, married woman