ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್  ನೋಟೀಸ್

ನವದೆಹಲಿ,ಜನವರಿ,24,2025 (www.justkannada.in): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ  ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನೋಟೀಸ್ ಜಾರಿ ಜಾರಿ ಮಾಡಿದೆ.

ನಟ ದರ್ಶನ್, ಪವಿತ್ರಾಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಆರೋಪಿಗಳಿಗೆ ನೋಟೀಸ್ ನೀಡಿದೆ. ಜಾಮೀನು ಪಡೆದು ಹೊರಬಂದಿದ್ದ  ನಟ ದರ್ಶನ್ ಗೆ ಇದೀಗ ಮತ್ತೆ ಸಂಕಷ್ಟ ಶುರುವಾಗಿದೆ.

Key words: Renukaswamy, murder case,  Supreme Court, notice,7 accused