ಮಂಡ್ಯ ,ಜನವರಿ,24,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಈ ಬಗ್ಗೆ ಜನರು ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ. ಪಿಎಲ್ ಡಿ ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
Key words: Microfinance, strict, legal action, Minister, Chaluvarayaswamy