ನವದೆಹಲಿ,ಫೆಬ್ರವರಿ,1,2025 (www.justkannada.in): 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರಂಭಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು ಮಧ್ಯಮ ವರ್ಗ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.
ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ ಯುವಕರು ರೈತರು ಮಧ್ಯಮವರ್ಗಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ವಿಕಸಿತ್ ಭಾರತವೇ ನಮ್ಮ ಗುರಿ ಮಧ್ಯಮ ವರ್ಗ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಬಡತನ ನಿರ್ಮೂಲನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ
ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Key words: Union Budget, Union Minister, Nirmala Sitharaman