ಮಂಡ್ಯ,ಫೆಬ್ರವರಿ,3,2025 (www.justkannada.in): ವಿಸಿ ನಾಲೆಗೆ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪಾಂಡವಪುರ ತಾಲ್ಲೂಕಿನ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಓರ್ವ ಸಾವನ್ನಪ್ಪಿದ್ದರೇ ಓರ್ವನನ್ನ ರಕ್ಷಣೆ ಮಾಡಲಾಗಿದೆ. ಮತ್ತಿಬ್ಬರು ನಾಪತ್ತೆಯಾಗಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ.
ನಾಲೆಗೆ ತಡೆಗೋಡೆ ಇಲ್ಲದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಕಾರನ್ನ ಮೇಲೆತ್ತಲು ಹರಸಾಹಸಪಡುತ್ತಿದ್ದಾರೆ.
Key words: mandya, Car, overturns, VC canal, death