ಈ ಬಾರಿ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ.

ಬೆಂಗಳೂರು, ಫೆಬ್ರವರಿ,3,2025 (www.justkannada.in):  ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಆದರೆ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈ ಬಾರಿ ಎಲ್ಲರಿಗೂ ಕ್ಲಿಯರ್ ಆಗಿದೆ. ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ಹಾಗಾಗಿ ಈ ಬಾರಿ ಯಾವುದೇ ರೀತಿಯ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ತಿಳಿಸಿದರು.

ಹಿಜಾಬ್ ಗೆ ಅವಕಾಶ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಹಿಜಾಬ್ ವಿವಾದ ಸದ್ಯ ಕೋರ್ಟ್ ನಲ್ಲಿದೆ. ಇನ್ನೂ ಇತ್ಯರ್ಥವಾಗಿಲ್ಲ. ಅದ್ಧರಿಂದ ಗೃಹ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Key words: no , grace marks,  SSLC, students, Minister, Madhu bangarappa