ಬೆಂಗಳೂರು/ಮೈಸೂರು,ಫೆಬ್ರವರಿ,5,2025 (www.justkannada.in): ಭ್ರಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಉದ್ಯಮಿ, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಮೈಸೂರಿನಲ್ಲಿ ಕಂಟ್ರಾಕ್ಟರ್, ಇಟ್ಟಿಗೆ ಫ್ಯಾಕ್ಟರಿ ವ್ಯವಹಾರ ಮಾಡುತ್ತಿದ್ದ ರಾಮಕೃಷ್ಣ ಎಂಬುವವರ ಮನೆ ಕಚೇರಿ ಮೇಲೆ ಐಟಿ ದಾಳಿಯಾಗಿದೆ. ರಾಮಕೃಷ್ಣ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು ಮೂರು ಕಾರಿನಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಬಂದಿದ್ದಾರೆ ಎನ್ನಲಾಗಿದೆ.
Key words: IT, raids, Bengaluru, Mysore