ನವದೆಹಲಿ,ಫೆಬ್ರವರಿ,5,2025 (www.justkannada.in): ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು ಸಂಜೆ 5 ಗಂಟೆ ವೇಳೆಗೆ 57.70 ರಷ್ಟು ವೋಟಿಂಗ್ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ . ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರ, ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಸೇರಿದಂತೆ ಜನರು ಸರತಿ ಸಾಲಿನಲ್ಲಿ ಆಗಮಿಸಿ ಮತದಾನ ಮಾಡಿದರು.
ದೆಹಲಿ ವಿಧಾನಸಭೆ ಚುನಾವಣೆ ಸಂಬಂಧ ಕೆಲ ಹೊತ್ತಿನಲ್ಲಿ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಲಿದೆ.
Key words: Delhi, Assembly Election, Polling