ನವದೆಹಲಿ,ಫೆಬ್ರವರಿ,6,2025 (www.justkannada.in): ಫೆಬ್ರವರಿ 10ರಂದು 18ನೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯಲಿದೆ.
ದೆಹಲಿಯ ಭಾರತ್ ಮಂಟಪದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯಲಿದ್ದು ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಈ ಬಾರಿ ಹೊಸ ಮಾದರಿಯಲ್ಲಿ ನಡೆಯುವ ಪರೀಕ್ಷೆ ಕುರಿತು ಚರ್ಚೆ ನಡೆಯಲಿದೆ. ಪರೀಕ್ಷೆ ಕುರಿತು ವಿದ್ಯಾರ್ಥಿಗಳ ಸಮಸ್ಯೆಯನ್ನು ಪ್ರಧಾನಿ ಮೋದಿ ಆಲಿಸಲಿದ್ದಾರೆ.
ಈ ಬಾರಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಭಾಗಯಾಗಲಿದ್ದಾರೆ. ಇಶಾ ಪೌಂಡೇಶನ್ ನ ಸದ್ಗುರು ಜಗ್ಗುವಾಸುದೇವ್ ಮಹಿಳಾ ಭಾಕ್ಸರ್ ಮೇರಿಕೋಮ್ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
Key words: Pariksha pe chrcha, program, Feb. 10, PM Modi