ಇಂದಿನಿಂದ ಸಿಎಂ ಸಿದ್ದರಾಮಯ್ಯರಿಂದ ‘ಬಜೆಟ್ ಪೂರ್ವಭಾವಿ ಸಭೆ’

ಬೆಂಗಳೂರು,ಫೆಬ್ರವರಿ,6,2025 (www.justkannada.in):  ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ‘ಬಜೆಟ್ ಪೂರ್ವಭಾವಿ ಸಭೆ’ ನಡಸಲಿದ್ದಾರೆ.

ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದ್ದು ಈ  ಹಿನ್ನೆಲೆಯಲ್ಲಿ ಇಂದಿನಿಂದ ಕಾವೇರಿ ನಿವಾಸದಲ್ಲಿ ಸಿಎಂಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಯಾಗಲಿದೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.

Key words: CM Siddaramaiah, budget, meeting, today