ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕ-ಎಚ್.ವಿ ರಾಜೀವ್

ಮೈಸೂರು,ಫೆಬ್ರವರಿ,6,2025 (www.justkannada.in): ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕವಾಗಿವೆ ಎಂದು ಮುಡಾ ಮಾಜಿ ಆಯುಕ್ತ ಎಚ್.ವಿ ರಾಜೀವ್ ತಿಳಿಸಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ವನವಮಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಮುಡಾ ಮಾಜಿ ಅಧ್ಯಕ್ಷ ಎಚ್. ವಿ ರಾಜೀವ್ ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕವಾಗಿವೆ. ಅವರ ಗ್ರಂಥಗಳಲ್ಲಿ ಮಾನವೀಯ ಗುಣಗಳ ಉಲ್ಲೇಖವಿದೆ. ಮಧ್ವಮತದ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಅಗ್ರಗಣ್ಯರಲ್ಲಿ ಮಧ್ವಾಚಾರ್ಯರು ಒಬ್ಬರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಕಾಂಗ್ರೆಸ್ ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಎಸ್ ಬಿ ವಾಸುದೇವಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ಪುನೀತ್ ಜಿ ಕುಡ್ಲೂರು, ವಿಕಾಸ್ ಶಾಸ್ತ್ರಿ, ರಂಗನಾಥ್, ಸುಚಿಂದ್ರ, ರಘು ಭಾರದ್ವಾಜ್, ಮಿರ್ಲೆ ಪನೀಶ್, ಕಡಕೋಳ ಜಗದೀಶ್, ಗುರುರಾಜ್, ವಿಜಯ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words:  Madhvanavami, mysore,  H.V. Rajiv