ಬೆಂಗಳೂರು,ಫೆಬ್ರವರಿ,7,2025 (www.justkannada.in): ಪ್ರೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೋಕ್ಸೋ ಪ್ರಕರಣವನ್ನ ರದ್ದುಗೊಳಿಸುವಂತೆ ಕೋರಿ ಬಿಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಆದರೆ ನ್ಯಾ ಎಂ ನಾಗಪ್ರಸನ್ನ ಅವರ ಪೀಠ ಪ್ರಕರಣವನ್ನ ರದ್ದುಗೊಳಿಸಲು ನಿರಾಕರಿಸಿದ್ದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸದ್ಯ ಬಿಎಸ್ ಯಡಿಯೂರಪ್ಪ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ
ಫೆ. 2ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಳೆದ 2024 ಮಾರ್ಚ್ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
Key words: Anticipatory bail, POCSO case, Former CM, BSY