ಬೆಂಗಳೂರು,ಫೆಬ್ರವರಿ,7,2025 (www.justkannada.in): ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ದೂರುದಾರ ಸ್ನೇಹಮಯಿ ನಿರ್ಧರಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸ್ನೇಹಮಯಿ ಕೃಷ್ಣ, ಹೈಕೋರ್ಟ್ ನಲ್ಲಿ ನಮಗೆ ಹಿನ್ನಡೆಯಾಗಿದೆ. ಹಾಗಂತ ನನ್ನ ಹೋರಾಟ ನಿಲ್ಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ನನ್ನ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಹೈಕೋರ್ಟ್ ಆದೇಶವನ್ನು ಕೂಲಂಕುಷವಾಗಿ ಪರಿಶೀಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿರುವುದು ನಿಜ. ಸಿದ್ದರಾಮಯ್ಯನವರು ಸಿಎಂ ಆಗಿರುವುದರಿಂದ ಲೋಕಾಯುಕ್ತ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹಾಗಾಗಿ ಸಿಬಿಐ ತನಿಖೆಗೆ ಕೋರಿದ್ದೇನೆ. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.
ನಮ್ಮ ಹೋರಾಟಕ್ಕೆ ಒಂದು ಸಣ್ಣ ಹಿನ್ನಡೆಯಾಗಿದೆ. ಇದರಿಂದ ನಾನು ನನ್ನ ಹೋರಾಟದಿಂದ ಹಿಂದೆ ಸರಿಯಲ್ಲ. ಸರ್ವೋಚ್ಚ ನ್ಯಾಯಾಲಯಕ್ಕೆ ನಾನು ಹೋಗುತ್ತೇನೆ. ಯಾವ ವಿಚಾರವನ್ನು ಇಟ್ಟುಕೊಂಡು ವಜಾ ಮಾಡಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಮುಂದಿನ ವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಸಿಬಿಐಗೆ ನೀಡುವಂತೆ ನಾವು ಹೋರಾಟ ಮಾಡುತ್ತೇವೆ. ಸರ್ವೋಚ್ಚ ನ್ಯಾಯಾಲಯ ಸಿಬಿಐಗೆ ನೀಡುತ್ತದೆ ಎಂಬ ನಂಬಿಕೆ ಇದೆ. ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದೋ, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ ಎಂದರು.
Key words: Muda case, Snehamayi Krishna, Supreme Court