ಬೆಂಗಳೂರು,ಅ,3,2019(www.justkannada.in): ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದನ್ನ ಖಂಡಿಸಿ ಇಂದು ಕೇಂದ್ರ ಸರ್ಕಾರದ ವಿರುದ್ದ ಉತ್ತರ ಕರ್ನಾಟಕ ಸಂಘ ಮಹಾಸಂಸ್ಥೆ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.
ಬೆಂಗಳೂರಿನ ರಾಜಾಜಿನಗರದ ಭಾಷ್ಯಂ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸುವ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆಗೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಚಾಲನೆ ನೀಡಿದರು. ಉತ್ತರ ಕರ್ನಾಟಕ ಸಂಘ ಮಹಾಸಂಸ್ಥೆ ವತಿಯಿಂದ ಬಾಷ್ಯಂ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಙಭಟನಾ ಮೆರವಣಿಗೆ ನಡೆಸುತ್ತಿದ್ದು ಕೂಡಲೇ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ನಿವೃತ್ತ ಡಿಜಿ ಮತ್ತು ಐಜಿ ಶಂಕರ್ ಬಿದರಿ, ನೆರೆ ಪ್ರವಾಹದಿಂದಾಗಿ ಸಂತ್ರಸ್ತ ಜನರು ನಲುಗಿ ಹೋಗಿದ್ದಾರೆ. ಕೇಂದ್ರ ಸರ್ಕಾರ ಪರಿಹಾರ ನೀಡದೆ ಏನ್ ಮಾಡುತ್ತಿದೆ. ನಮ್ಮ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಪ್ರವಾಹ ಬಂದು 60 ದಿನಗಳಾದರೂ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ. ನೆರೆ ಸಂತ್ರಸ್ತರ ಸಹಾಯಕ್ಕೆ ಬಾರದ ಸಂಸದರನ್ನ ಆಯ್ಕೆ ಮಾಡಿರುವುದು ನಮ್ಮ ತಪ್ಪು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಕಿಡಿಕಾರಿದರು.
Key words: flood relief-delay-protest-against-central govrnament