ಬೆಂಗಳೂರು, ಫೆಬ್ರವರಿ,10,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಗೆ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಇಡಿ ಸಮನ್ಸ್ ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ ಮಾಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.
ಸಚಿವ ಭೈರತಿ ಸುರೇಶ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್ ಅವರು, ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ.14 ಸೈಟ್ ಹಂಚಿಕೆಗೂ ಭೈರತಿ ಸುರೇಶ್ ಗೂ ಸಂಬಂಧವಿಲ್ಲ. ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇಡಿ ಸಮನ್ಸ್ ಕಾನೂನುಬಾಹಿರ ಎಂದು ಹೇಳಿದರು.
Key words: Temporary relief, Minister, Bhairati Suresh, CM wife