ಇನ್ವೆಸ್ಟ್ ಕರ್ನಾಟಕ 2025 ಸಮಾವೇಶಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಚಾಲನೆ

ಬೆಂಗಳೂರು,ಫೆಬ್ರವರಿ,11,2025 (www.justkannada.in): ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು.

ಫೆಬ್ರವರಿ 14ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಇಂದು ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಗೃಹ ಸಚಿವ ಪರಮೇಶ್ವರ್, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವ ಕೃಷ್ಣ ಭೈರೇಗೌಡ , ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಉಪಸ್ಥಿತರಿದ್ದರು.

Key words: Union Minister,  Rajnath Singh, inaugurates, Invest Karnataka 2025