ಆರೋಪಿಗಳನ್ನ ಬಂಧಿಸಿ: ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಿ: ವಿಪಕ್ಷ ನಾಯಕರಿಂದ ಡಿಜಿ&ಐಜಿಪಿಗೆ ಮನವಿ

ಬೆಂಗಳೂರು,ಫೆಬ್ರವರಿ,12,2025 (www.justkannada.in):  ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆತ ಪ್ರಕರಣ ಹಾಗೂ ಭದ್ರಾವತಿ ಶಾಸಕ ಸಂಗಮೇಶ್ ಪುತ್ರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸಿ ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಿ ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್‌ಮೋಹನ್ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧೆಡೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆ ದೌರ್ಜನ್ಯವನ್ನು ಖಂಡಿಸಿ ಆರ್.ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಮುಂಭಾಗ ಧರಣಿ ನಡೆಸಿ ನಂತರ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಆತ್ಮಹತ್ಯೆ ಭಾಗ್ಯ ಭಿತ್ತಿಪತ್ರಗಳನ್ನು ಹಿಡಿದು ಇಬ್ಬರು ನಾಯಕರು ಧರಣಿ ನಡೆಸಿದರು. ನಂತರ  ನೃಪತುಂಗ ರಸ್ತೆಯಲ್ಲಿರುವ  ಡಿಜಿ&ಐಜಿಪಿ ಕಚೇರಿಗೆ ತೆರಳಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಮೋಹನ್ ಅವರನ್ನು ಭೇಟಿ ಮಾಡಿ ಆರೋಪಿಗಳನ್ನ ಬಂಧಿಸಿ ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಿ ಎಂದು ಮನವಿ ಸಲ್ಲಿಸಿದರು.

Key words: opposition leaders, R.Ashok, Chalavadi Narayanaswamy, DGIGP