ಬೆಂಗಳೂರು,ಫೆಬ್ರವರಿ,12,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಹೌದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದೆ. ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ ಗೆ ಸಂಬಂಧಿಸಿದ ಸುಗ್ರೀವಾಜ್ಣೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು. ಇದೀಗ ಸುಗ್ರೀವಾಜ್ಣೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
Key words: Governor, signs, Micro Finance, Ordinance