ಮೈಸೂರು,ಫೆಬ್ರವರಿ,13,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಪ್ರಚೋದನಾಕಾರಿ ಭಾಷಣವೇ ಘಟನೆಗೆ ಕಾರಣ ಎನ್ನಲಾಗುತ್ತಿದ್ದು ಇದೀಗ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬಾತನೇ ಪ್ರಚೋದನಾಕಾರಿ ಭಾಷಣ ಮಾಡಿದ್ದು ಎನ್ನಲಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿರುವ ಮುಷ್ತಾಕ್ ಗಾಗಿ ಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ
ಮುಫ್ತಿ ಮುಷ್ತಾಕ್ ಮಕ್ಬೋಲಿ ಮೈಕ್ ಹಿಡಿದು ಪ್ರಚೋದನೆ ಮಾಡಿದ್ದ ಎನ್ನಲಾಗಿದೆ. ಧರ್ಮಕ್ಕಾಗಿ ಬದುಕಿರುವ ಮುಸ್ಲಿಂರು ಇನ್ನು ಇದ್ದಾರೆ. ಧರ್ಮ ರಕ್ಷಣೆಯ ಬದ್ದತೆ ನಿನ್ನೆಯೂ ಇತ್ತು ಇವತ್ತು ಇದೆ. ಎಲ್ಲಾ ಘೋಷಣೆ ಕೂಗಿ ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ ಸುರೇಶ್ ಹೆಸರಿನ ಹರಾಮಿ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ ಆತನನ್ನು ನೇಣಿಗೆ ಹಾಕಬೇಕು. ಮರಣದಂಡನೆ ವಿಧಿಸಬೇಕು ನಿಮ್ಮ ಇಚ್ಚೆ ಏನು ? ಆತನಿಗೆ ಮರಣದಂಡನೆಯಾಗಬೇಕು ಎಂಬುದು. ಮೈಸೂರಿನ ಎಲ್ಲಾ ಮುಸ್ಲಿಂರು ಒಂದಾಗಿ ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಅವಶ್ಯಕತೆ ಬಂದರೆ ನಮ್ಮ ತಲೆ ಬೇಕಾದರೂ ಕತ್ತರಿಸಿಕೊಳ್ಳುತ್ತೇವೆ. ನಮ್ಮ ಮಕ್ಕಳ ತಲೆ ಬೇಕಾದರೂ ಬಲಿಕೊಡುತ್ತೇವೆ ಎಂದು ಮುಷ್ತಾಕ್ ಮೈಕ್ ಮೂಲಕ ಕೂಗಿ ಕೂಗಿ ಹೇಳಿದ್ದ. ಇದರಿಂದ ಜನರು ಪ್ರಚೋದನೆಗೊಳಗಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸದ್ಯ ಪ್ರಚೋದನೆ ಮಾಡಿದ ಮುಷ್ತಾಕ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 13 ಮಂದಿಯನ್ನ ಬಂಧಿಸಿದ್ದಾರೆ.
Key words: Udayagiri, stone pelting, provocative speech, Police,