IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ

ಬೆಂಗಳೂರು,ಫೆಬ್ರವರಿ,13,2025 (www.justkannada.in): ಮುಂದಿನ ತಿಂಗಳಿನಿಂದ ಐಪಿಎಲ್ ಜ್ವರ ಶುರುವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಟಿದಾರ್ ಆಯ್ಕೆಯಾಗಿದ್ದಾರೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ  31 ವರ್ಷದ ಪಾಟಿದಾರ್​ಗೆ ಇದೀಗ ಆರ್ ಸಿಬಿ ಕ್ಯಾಪ್ಟನ್ ಪಟ್ಟ ಒಲಿದಿದೆ.

ಕಳೆದೆರಡು ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು . 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ವಿರಾಟ್ ಕೊಹ್ಲಿ 2013 ರಿಂದ 2021 ರವರೆಗೆ ವಿರಾಟ್ 143 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದಾರೆ.

Key words: IPL,  Rajat Patidar, appointed, RCB,  new captain