ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು.
ಘಟನೆ ನಡೆದು ನಾಲ್ಕು ದಿನಗಳ ಬಳಿಕ ಉದಯಗಿರಿ ಪೊಲೀಸ್ ಠಾಣೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿದ್ದು, ಪೊಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದರು. ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ಸೇರಿದಂತೆ ಇನ್ಸ್ ಪೆಕ್ಟರ್ ಗಳು ಉಪಸ್ಥಿತರಿದ್ದರು.
Key words: Home Minister, Dr. G. Parameshwar, Udayagiri, Police Station