ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಕಾರಣ ಬಯಲು

ಮೈಸೂರು,ಫೆಬ್ರವರಿ,17,2025 (www.justkannada.in):  ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನ ವಿಶ್ವೇರಯ್ಯನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಚೇತನ್( 45), ರೂಪಾಲಿ (43), ಪ್ರಿಯಂವದ(65) ಕುಶಾಲ್( 15) ಮೃತಪಟ್ಟವರು.  ಮೊದಲು ಚೇತನ್ ತನ್ನ ತಾಯಿ, ಪತ್ನಿ ಹಾಗೂ ಮಗನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,  ನಂತರ ತಾನು ನೇಣು ಬಿಗಿದು ಅತ್ಮಹತ್ಯೆಗೆ ಶರಣಾಗಿದ್ದಾರೆ . ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ.  ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ ನನ್ನ ಸ್ನೇಹಿತರು, ಸಂಬಂಧಿಕರಿಗೆ ಯಾರೂ ತೊಂದರೆ ಕೊಡಬೇಡಿ. ನಮ್ಮನ್ನು ಕ್ಷಮಿಸಿ ಐ ಆಮ್ ಸ್ವಾರಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ .

ಇನ್ನು ಸ್ಥಳಕ್ಕೆ ವಿದ್ಯಾರಣ್ಯ ಪುರಂ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Four members, same family, suicide, Mysore