ಬೆಂಗಳೂರು,ಫೆಬ್ರವರಿ,26,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನ ಹತ್ಯೆಗೈದು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದ ವೇಳೆ ಆರೋಪಿ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಲಕ್ಷ್ಮಯ್ಯ ಬಂಧಿತ ಆರೋಪಿ. ಈತ ತನ್ನ ಪತ್ನಿ ರಾಧಮ್ಮ (45) ರನ್ನು ಕೊಲೆ ಮಾಡಿ ಅಂತ್ಯಕ್ರಿಯೆಗೆ ಮುಂದಾಗಿದ್ದ.
ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ ಕ್ಷಣದಲ್ಲಿ ಪೊಲೀಸರು ಸ್ಮಶಾನಕ್ಕೆ ಆಗಮಿಸಿ ಆರೋಪಿ ಪತಿ ಲಕ್ಷ್ಮಯ್ಯನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Key words: wife, murdered, Accused, husband, arrest