ಬೆಂಗಳೂರು,ಫೆಬ್ರವರಿ,26,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಜಾರಿ ಮಾಡಿರುವ ಶಕ್ತಿಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಸರ್ಕಾರಿ ಬಸ್ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಈವರೆಗೆ 400 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.
ಯೋಜನೆ ಜಾರಿಯಾದ ನಂತರದಿಂದ ಈವರೆಗೆ 400 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ ರೂ.9 ಸಾವಿರ ಕೋಟಿ ದಾಟಿದೆ. ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ ಎಂದಿದ್ದಾರೆ.
Key words: Shakti Yojana, Women , travelled, CM Siddaramaiah