ಬೆಂಗಳೂರು,ಫೆಬ್ರವರಿ,27,2025 (www.justkannada.in): ಸಂಚಾರ ನಿಯಮ ಉಲ್ಲಂಘಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಅಶ್ಲೀಲ ಸನ್ನೆ ತೋರಿದ್ದ ಕಾರು ಚಾಲಕನನ್ನ ಚಾಮರಾಜಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹರ್ಷ ಬಂಧಿತ ಆರೋಪಿ. ನಿನ್ನೆ ಸಂಜೆ ಗೋಪಾಲನ್ ಮಾಲ್ ಬಳಿ ಈ ಘಟನೆ ನಡೆದಿತ್ತು. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರಿಗೆ ಕಾರು ಚಾಲಕ ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದ ಎನ್ನಲಾಗಿದೆ.
ಟ್ರಾಫಿಕ್ ನಿಯಮ ಉಲ್ಲಂಘಿಸಿ ಕಾರು ಚಾಲನೆ ಮಾಡುತ್ತಿದ್ದ ಹರ್ಷನನ್ನು ಈ ಬಗ್ಗೆ ಅಕ್ಷತಾ ರವಿಕುಮಾರ್ ಪ್ರಶ್ನಿಸಿದ್ದಾರೆ. ಈ ವೇಳೆ ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದನು. ಈ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
Key words: Car driver, arrested, Bangalore, Youth Congress general secretary