ಮೈಸೂರು,ಅ,4,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ದಸರಾ ಪಾಸ್ ಗಾಗಿ ಗಲಾಟೆ ನಡೆದಿದೆ.
ದಸರಾ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳನ್ನ ವೀಕ್ಷಿಸಲು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳೆದ ಎರಡು ದಿನಗಳಿಂದ ಪಾಸ್ ನೀಡಲಾಗುತ್ತಿದೆ. ಈ ನಡುವೆ ಎರಡು ದಿನದಿಂದ ಕ್ಯೂನಲ್ಲಿ ನಿಂತರೂ ಪಾಸ್ ಸಿಗದಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಸ್ ಪಡೆದುಕೊಳ್ಳಲು ಟೋಕನ್ ವ್ಯವಸ್ಥೆ ಮಾಡಿದ್ದರೂ ಪಾಸ್ ಸಿಗುತ್ತಿಲ್ಲ. ಪಾಸ್ ನೀಡಲು ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ ಪಾಸ್ ಖಾಲಿಯಾಗುತ್ತಿದ್ದು, ಅಧಿಕಾರಿಗಳು ಕಾಳಸಂತೆಯಲ್ಲಿ ಪಾಸ್ ವಿತರಣೆ ಮಾಡಲು ಮುಂದಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅಲ್ಲದೆ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಸಾರ್ವಜನಿಕರು ಪ್ರತಿಭಟನೆಗೆ ಮುಂದಾಗಿ, ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Key words: Mysore Dasara-2019- Pass-public – protest- DC office.