ಚಾಮರಾಜನಗರ,ಫೆಬ್ರವರಿ,28,2025 (www.justkannada.in): ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಬಳಸುತ್ತಿದ್ದು ಇದರಿಂದ ಎಸ್ ಸಿ, ಎಸ್ ಟಿ ಸಮುದಾಯದ ಅಭಿವೃದ್ಧಿ ಕುಂಠಿತವಾಗಿದೆ. 25 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ. ಇದರಿಂದ ಎಸ್‌ಸಿಎಸ್‌ಟಿ ಸಮುದಾಯಕ್ಕೆ ಮನೆ, ಮಕ್ಕಳಿಗೆ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣ, ಗಂಗಾ ಕಲ್ಯಾಣ ಯೋಜನೆ, ಸಮುದಾಯ ಭವನ, ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ ಸಂಪನ್ಮೂಲದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಕಾಂಗ್ರೆಸ್ ಸರ್ಕಾರದ ತಪ್ಪು ಆಡಳಿತದಿಂದ ರಾಜ್ಯ ಸಾಲದ ಸುಳಿಗೆ ಸಿಲುಕಿಕೊಂಡಿದೆ. ನಮ್ಮ ಪಕ್ಷ ಗ್ಯಾರಂಟಿ ಯೋಜನೆಗಳ ವಿರುದ್ಧವಿಲ್ಲ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಅಗತ್ಯವಿರುವ 56,000 ಕೋಟಿಗಳಷ್ಟು ಹಣವನ್ನು ಪ್ರತ್ಯೇಕ ಮೀಸಲಿಡಬೇಕು ಮತ್ತು ಎಸ್‌ಸಿ/ಎಸ್‌ಟಿ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಶೇ 24.8 ರಷ್ಟು ಹಣವನ್ನು ಬಳಸಬಾರದು ಎಂದು ಸಲಹೆ ನೀಡಿದರು.
Key words: SC, ST ,community, money, Sriramulu, government