ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ

ಹಾಸನ,ಮಾರ್ಚ್,1,2025 (www.justkannada.in): ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಹ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸದ್ಗುರು ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿ.ಕೆ.ಶಿವಕುಮಾರ್ ಅವರ ನಡೆ ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ? ಅವರೇ ಹೇಳಬೇಕು ಎಂದರು.

ಈ ಹಿಂದೆ, ರಾಹುಲ್ ಗಾಂಧಿ ಯಾರು? ಅವರು ಗೊತ್ತೇ ಇಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಳ್ತಾರೆ ಅಂದ್ರೆ ಇದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, KN Rajanna, DCM DK Shivakumar, Sadguru