“ಸಿಎಂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ” ಯೋಜನೆ ಜಾರಿಗೆ 8,000 ಕೋಟಿ ರೂ. ನಿಗಧಿ : ಸಿದ್ದರಾಮಯ್ಯ.

Rs 8,000 crore has been allocated for the implementation of the "CM Infrastructure Development Programme" scheme. Schedule: Siddaramaiah.

 

ಬೆಂಗಳೂರು, ಮಾ.೦೭,೨೦೨೫: 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ರೂ.ಗಳು ಸಂಗ್ರಹವಾಗುವ ನಿರೀಕ್ಷೆಯಿದ್ದು, ಆಯವ್ಯಯ ಗುರಿಗಿಂತ ಹೆಚ್ಚು ಸಂಗ್ರಹವಾಗಲಿದೆ.

ತೆರಿಗೆಯೇತರ ರಾಜಸ್ವವು ವರ್ಷವಾರು ಶೇ.10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆಯಿದೆ. ಆದರೂ ಜಿ.ಎಸ್.ಡಿ.ಪಿ.ಯ ಶೇಕಡಾವಾರು ಪರಿಗಣಿಸಿದಾಗ ತೆರಿಗೆಯೇತರ ಸಂಪನ್ಮೂಲ ಹೆಚ್ಚಳಕ್ಕೆ ವಿಪುಲ ಅವಕಾಶಗಳಿವೆ. ಸಂಪನ್ಮೂಲ ಕ್ರೊಢೀಕರಣಕ್ಕಾಗಿ ರಾಜ್ಯ ಸರ್ಕಾರವು ʻಸಂಪನ್ಮೂಲ ಕ್ರೊಢೀಕರಣ ಸಮಿತಿʼಯನ್ನು ರಚನೆ ಮಾಡಿರುತ್ತದೆ.

ಈ ಸಮಿತಿಯು ಮಧ್ಯಂತರ ವರದಿಯನ್ನು ನೀಡಿದ್ದು, ಸಮಿತಿಯ ಶಿಫಾರಸ್ಸಿನ ಅನ್ವಯ ಸರ್ಕಾರವು ಸಮಯಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಒದಗಿಸಲಾಗಿದೆ. ಕಳೆದ ಎರಡು ಆಯವ್ಯಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆಗೆ ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ. ಯ ಶೇ.3ರ ಮಿತಿಯೊಳಗೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ಜಿ.ಎಸ್.ಡಿ.ಪಿ. ಯ ಶೇ.25ರ ಮಿತಿಯೊಳಗೆ ನಿಯಂತ್ರಿಸುವ ಮೂಲಕ ವಿತ್ತೀಯ ಶಿಸ್ತನ್ನು ಪಾಲಿಸಲಾಗಿರುತ್ತದೆ ಎಂಬುದು ಗಮನಾರ್ಹ.

ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗುವುದು.

ಸರ್ಕಾರವು ತನ್ನ ಆಡಳಿತ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಹಾಗೂ ಪಾರದರ್ಶಕತೆಯನ್ನು ಹೆಚ್ಚಿಸಲು ಬದ್ಧವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ವಿವಿಧ ನಿಯಮಗಳ ಸರಳೀಕರಣದ ಮೂಲಕ ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸಲಾಗುವುದು.

ವಿತ್ತೀಯ ಕೊರತೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಸೂಚಿಸಿರುವ ಮಿತಿಯೊಳಗೆ ನಿರ್ವಹಿಸಿ, ನಾವು ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡುವುದರೊಂದಿಗೆ ಬಂಡವಾಳ ವೆಚ್ಚದಲ್ಲಿಯೂ ಗಣನೀಯ ಹೆಚ್ಚಳ ಮಾಡಿದ್ದು, ಹೆಮ್ಮೆಯ ಸಂಗತಿ.

ವಿತ್ತೀಯ ಶಿಸ್ತು ಕಾಯ್ದುಕೊಂಡು ಜನಕಲ್ಯಾಣ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಆಯವ್ಯಯ ಹಂಚಿಕೆ ಮಾಡುವುದರೊಂದಿಗೆ, ಬಂಡವಾಳ ವೆಚ್ಚಗಳಿಗೂ ಅನುದಾನ ಒದಗಿಸಿ, ರಾಜ್ಯದ ಆರ್ಥಿಕತೆಯನ್ನು ಸದೃಢಗೊಳಿಸುವ ಅಂಶಗಳೊಂದಿಗೆ ಕಳೆದ ಸಾಲಿನ ಆಯವ್ಯಯ ಮಂಡಿಸಿದ್ದೆನು. ಇದೀಗ 2025-26ನೇ ಸಾಲಿನ ಆಯವ್ಯಯವನ್ನು ಸಹ ಇದೇ ಆಶಯದೊಂದಿಗೆ ಮಂಡಿಸಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ.

key words: Rs 8,000 crore, “CM Infrastructure Development Programme”, Siddaramaiah. Budget

SUMMARY:

Rs 8,000 crore has been allocated for the implementation of the “CM Infrastructure Development Programme” scheme. Schedule: Siddaramaiah.