ಬೆಂಗಳೂರು, ಮಾ.೦೭,೨೦೨೫: ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಘೋಷಣೆ…
ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ
ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು.
key words: Higher Education, 2,500 crore, Centre of Excellence Project
Higher Education: Rs 2,500 crore allocated for setting up Centre of Excellence Project Implementation