ಬೆಂಗಳೂರು, ಮಾ.೦೭,೨೦೨೫: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್ ಮನನ ತರಬೇತಿ ನೀಡಲಾಗುವುದು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.
KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.
key words: Rs 150 crore, constituent college of Visvesvaraya Technological University. VTU
Rs 150 crore has been allocated for setting up a constituent college of Visvesvaraya Technological University.