“ಹಲಾಲ್ ಬಜೆಟ್ “  ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ ಎಂದು ಜರಿದ ಸಿಎಂ ಸಿದ್ದರಾಮಯ್ಯ.

 

ಮೈಸೂರು, ಮಾ.7,2025 :  ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟ್ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ  ತತ್ವದ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಜೆಟ್ ಮಂಡನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದಿಷ್ಟು…

ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು  ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ.

ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದರು.

ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? 

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ.  4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95  ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ  2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ?  ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದರು.

ನುಡಿದಂತೆ ನಡೆದ ಸರ್ಕಾರ :

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ,  ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ   ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು  ಮೀಸಲಿರಿಸಿದೆ.  ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

key words: CM Siddaramaiah,BJP ,”halal budget” , dirty mentality.

CM Siddaramaiah slams BJP for criticizing “halal budget” as dirty mentality.