ಬೆಂಗಳೂರು,ಮಾರ್ಚ್,10,2025 (www.justkannada.in): ಬೆಂಗಳೂರಿನಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಜಾತಿ ಗಣತಿ, ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಬಜೆಟ್ ಅನುಮೋದನೆ . ವಿಧೇಯಕಗಳ ಅಂಗೀಕಾರ ಸದನದಲ್ಲಿ ವಿಪಕ್ಷಗಳ ಆರೋಪಗಳನ್ನ ಸಮರ್ಥವಾಗಿ ಎದುರಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಹಾಗೆಯೇ ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ದಿ ಮಂತ್ರ ಪಠಿಸಿರುವ ಬಜೆಟ್ ಅನ್ನು ಅಧಿವೇಶನದಲ್ಲಿ ಸಮರ್ಥಿಸಿಕೊಳ್ಳಲು ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ.
Key words: Congress, Legislature Party, meeting, today