ವಿಧಾನಸಭೆಯಲ್ಲಿ ‘ಮೈಕ್ರೋ ಫೈನಾನ್ಸ್’ ವಿಧೇಯಕ ಅಂಗೀಕಾರ

ಬೆಂಗಳೂರು,ಮಾರ್ಚ್,10,2025 (www.justkannada.in):  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಮೈಕ್ರೋ ಫೈನಾನ್ಸ್’ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ಇತ್ತೀಚಿಗೆ  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ  ಬೇಸತ್ತಿ ಸಾಕಷ್ಟು ಜನ ಆತ್ಮಹತ್ಯೆಗೆ ಶರಣಾದ ಘಟನೆಗಳು ನಡೆದಿದ್ದವು . ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ನಂತರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು.  ಇದೀಗ ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ ವಾಗಿದೆ.

Key words:  Micro Finance Bill, passed ,  Assembly